Header Ads

ಬಂಟರ ಸಂಘದ ಅಧ್ಯಕ್ಷ ತಿಮ್ಮಯ್ಯ ಶೆಟ್ಟಿ

 ಮೂಡುಬಿದಿರೆ: ಬಂಟ ಸಮುದಾಯವನ್ನು ಸರ್ಕಾರದ ೩ಎ ಕೆಟಗರಿಯಿಂದ ೨ ಬಿಗೆ ಸೇರ್ಪಡೆಗೊಳ್ಳಬೇಕು. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ವಿಶ್ವಬಂಟರ ಮಾಹಿತಿ ಕೋಶವನ್ನು ತಯಾರಿಸುವ ಕಾರ್ಯ ನಡೆಯುತ್ತಿದ್ದು ಸಮಾಜ ಬಾಂಧವರು ಈ ಕರ‍್ಯದಲ್ಲಿ ಕೈಜೋಡಿಸಬೇಕು ಎಂದು ಬಂಟರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಹೇಳಿದರು.



ಮೂಡುಬಿದಿರೆ ಬಂಟರ ಸಂಘದ ವತಿಯಿಂದ ಪಂಚರತ್ನ ಸಭಾಭವನದಲ್ಲಿ ಶನಿವಾರ ಶನಿವಾರ ನಡೆದ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 

ಶಾಸಕ ಉಮಾನಾಥ ಕೋಟ್ಯಾನ್ ಮುಖ್ಯ ಅತಿಥಿಯಾಗಿ ಮಾತನಾಡಿ, ಬಂಟರು ಜಗತ್ತಿನ ಯಾವ ಮೂಲೆಯಲ್ಲಿದ್ದರೂ ತುಳುನಾಡಿನ ಸಂಸ್ಕೃತಿ ಸಂಸ್ಕಾರವನ್ನು ರೂಡಿಸಿಕೊಂಡಿದ್ದಾರೆ. ಬಂಟ ಸಮಾಜವು ಎಲ್ಲಾ ರಂಗಗಳಲ್ಲಿಯೂ ಮೇಲ್ಪಂಕ್ತಿಯಲ್ಲಿದೆ ಎಂದರು. 

ಬಂಟರ ಸಂಘದ ಅಧ್ಯಕ್ಷ ತಿಮ್ಮಯ್ಯ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. 

ಜಾಗತಿಕ ಬಂಟರ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ., ಕೆಪಿಸಿಸಿ ಪ್ರಧಾನ ಕರ‍್ಯದರ್ಶಿ ಮಿಥುನ್ ರೈ, ಜಯಶ್ರೀ ಅಮರನಾಥ ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು. 

ಸಂಘದ ಉಪಾಧ್ಯಕ್ಷ ದಿನಕರ ಶೆಟ್ಟಿ, ಡಾ.ವಿನಯಕುಮಾರ್ ಹೆಗ್ಡೆ, ಕಾರ್ಯದರ್ಶಿ ಮೇಘನಾಥ ಶೆಟ್ಟಿ, ಕೋಶಾಧಿಕಾರಿ ಎಂ.ಪುರುಷೋತ್ತಮ ಶೆಟ್ಟಿ, ಜೊತೆ ಕಾರ್ಯದರ್ಶಿಗಳಾದ ಕೆ.ಪಿ ಸುಚರಿತ ಶೆಟ್ಟಿ, ದಿವಾಕರ ಶೆಟ್ಟಿ, ಸುರೇಶ್ ಶೆಟ್ಟಿ, ಪ್ರೇಮನಾಥ ಮಾರ್ಲ, ಕಾಂತಿಲತಾ ಶೆಟ್ಟಿ ಉಪಸ್ಥಿತರಿದ್ದರು.

ದ.ಕ.ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ಪಿ. ಸುಚರಿತ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಎಸ್‌ಎಸ್‌ಎಲ್‌ಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ನಿಹಾರಿಕಾ ಶೆಟ್ಟಿ, ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ಅನ್ವಿತಾ ಶೆಟ್ಟಿ ಅವರನ್ನು ಗೌರವಿಸಲಾಯಿತು. 

ತೋಡಾರು ದಿವಾಕರ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಸುರೇಶ್ ಶೆಟ್ಟಿ ವಂದಿಸಿದರು. 

೪೫೦ ವಿದ್ಯಾರ್ಥಿಗಳಿಗೆ ೯ ಲಕ್ಷ ರೂ ವಿದ್ಯಾರ್ಥಿವೇತನ ನೀಡಲಾಯಿತು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.